ಕಲಬುರ್ಗಿ : ಅಕ್ರಮ ಮದ್ಯ ಮಾರಾಟ – ಅಬಕಾರಿ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತರಾಟೆ

ಕಲಬುರ್ಗಿ : ಕಲಬುರ್ಗಿ – ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ‘ ಕಿರಾಣಿ ಅಂಗಡಿಗಳಲ್ಲಿಯೂ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದೆ. ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ಮಾಡಿದರೂ ಏಕೆ ಕ್ರಮ ಕೈಗೊಳ್ಳುತ್ತಿಲ್ಲ. ಅಕ್ರಮ ಮದ್ಯದ ಅಂಗಡಿ ಮುಚ್ಚಲಾಗುವುದಿಲ್ಲ ಎನ್ನೋದಾದ್ರೆ ಬರೆದುಕೊಟ್ಟುಬಿಡಿ ‘ ಎಂದು ಕಿಡಿ ಕಾರಿದ್ದಾರೆ.

ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ ‘ ಮನ ಬಂದಂತೆ ಮದ್ಯದ ಅಂಗಡಿಗಳ ಸ್ಥಳಾಂತರವೂ ನಡೆದಿದೆ. ಮತ್ತೊಮ್ಮೆ ಅನಧಿಕೃತವಾಗಿ ಮದ್ಯದ ಅಂಗಡಿ ಸ್ಥಳಾಂತರಗೊಂಡರೆ ನಿಮ್ಮ ಇಲಾಖೆಯನ್ನೇ ಮುಚ್ಚಿಸಿಬಿಡುತ್ತೇನೆ ‘ ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com