ತುಮಕೂರು : ಜಿಲ್ಲೆಯಲ್ಲಿ ವರುಣನ ಆರ್ಭಟ – ಸಿಡಿಲಿಗೆ ಓರ್ವ ವ್ಯಕ್ತಿ ಬಲಿ, ಜಾನುವಾರು ಸಾವು

ತುಮಕೂರು ಜಿಲ್ಲೆಯ ವಿವಿಧೆಡೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸಾವು ನೋವು ಸಂಭವಿಸಿವೆ. ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲದೆ, ಜಾನುವಾರೊಂದು ಬಲಿಯಾಗಿದೆ.

ನವೀನ್​ (25) ಯುವಕ ಎಂಬಾತ ಮೃತನಾಗಿದ್ದಾನೆ. ತೊಗರಿಗುಂಟೆ ಗ್ರಾಮದ ನವೀನ್ ತಂದೆ ಜೊತೆ ದ್ವಾರಾಳು ಗ್ರಾಮದ ಉಡಿಸಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದರು. ದೇಗುಲದಲ್ಲಿ ಪೂಜೆ ಸಲ್ಲಿಸಿ ಹಿಂದಿರುಗುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.

ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮಧುಗಿರಿ ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರಿಗೆ ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಲಕ್ಷ್ಮಮ್ಮ ಎಂಬುವರ ಸ್ಥಿತಿ ಗಂಭೀರವಾಗಿದ್ದು, ವೆಂಕಟಲಕ್ಷ್ಮಮ್ಮ ಹಾಗೂ ಅಂಜಿನಮ್ಮ ಎಂಬುವರ ಕೈ ಕಾಲುಗಳಿಗೆ ಗಾಯಗಳಾಗಿವೆ.  ಮೂವರನ್ನು ಚಿಕಿತ್ಸೆಗಾಗಿ ಮಧುಗಿರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ
ಮಧುಗಿರಿ ತಾಲೂಕಿನ ಗುಟ್ಟೆ ಗ್ರಾಮದಲ್ಲಿ ರಂಗಮ್ಮ ಎಂಬುವರಿಗೆ ಸೇರಿದ ಹಸು ಸಿಡಿಲು ಬಡಿದು ಮೃತಪಟ್ಟಿದೆ.

Leave a Reply

Your email address will not be published.

Social Media Auto Publish Powered By : XYZScripts.com