ಕುಡಿಯುವ ನೀರಿಗಾಗಿ ಆಗ್ರಹ : ಗ್ರಾಮ ಪಂಚಾಯತಿ ಎದುರು ಗ್ರಾಮಸ್ಥರಿಂದ ಪ್ರತಿಭಟನೆ..!

ಗದಗ : ಕುಡಿಯು ನೀರಿಗಾಗಿ ಆಗ್ರಹಿಸಿ ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ.

ಮಾಹಾಲಿಂಗಪುರ ತಾಂಡಾದ ಜನರು ಗ್ರಾಮ ಪಂಚಾಯತಿಗೆ ಬೀಗ ಹಾಕುವ ಮೂಲಕ ಕುಡಿಯುವ ನೀರಿಗಾಗಿ ಆಗ್ರಹಿಸಿದ್ರು, ಸೋರಟೂರ ಗ್ರಾ.ಪಂ ವ್ಯಾಪ್ತಿಗೆ ಒಳಪಡುವ ಮಾಹಾಲಿಂಗಪುರ ಗ್ರಾಮದ ಜನರು ತಮ್ಮೂರಿನ ನೀರಿನ ಸಮಸ್ಯೆಗೆ ಸ್ಪಂದಿಸದ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ರು.

ಗ್ರಾಮಕ್ಕೆ ಕಳೆದ ಒಂದು ತಿಂಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗಿಲ್ಲ. ಹೀಗಾಗಿ ಖಾಲಿ‌ ಕೊಡಗಳೊಂದಿಗೆ ಗ್ರಾ.ಪಂ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ರು. ಈ ವೇಳೆ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ಕೂಡಲೇ ಕುಡಿಯೋ ನೀರು ಪೂರೈಕೆ ಮಾಡದೇ ಹೊದ್ರೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.

Leave a Reply

Your email address will not be published.

Social Media Auto Publish Powered By : XYZScripts.com