ಸತೀಶ್ ಜಾರಕಿಹೊಳಿ ಪಕ್ಕದ ಕುರ್ಚಿಯಲ್ಲಿ ಕುಳಿತ ಲಕ್ಷ್ಮೀ ಹೆಬ್ಬಾಳ್ಕರ್ – ಬೆಳಗಾವಿಯಲ್ಲಿ ಅಚ್ಚರಿಯ ನಡೆ

ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳಕರ ಅವರ ನಡೆ ಅಚ್ಚರಿ ಮೂಡಿಸಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಸತೀಶ ಜಾರಕಿಹೊಳಿ ಜೊತೆ ಪಕ್ಕದ ಕುರ್ಚಿಯಲ್ಲಿ ಕುಳಿತು ಎಲ್ಲರ ಅಚ್ಚರಿಗೆ ಕಾರಣವಾಗಿದ್ದಾರೆ.

ಸತೀಶ್ ಜಾರಕಿಹೊಳಿ ಪಕ್ಕದ ಕುರ್ಚಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕುಳಿತು ಮಾತನಾಡುತ್ತಿರುವ ವಿಡಿಯೋ ಮಾಧ್ಯಮಗಳ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ಸಂಸದ ಪ್ರಕಾಶ ಹುಕ್ಕೆರಿ ಮತ್ತು ಪ್ರಭಾಕರ ಕೋರೆ ಮಾತು ಕತೆ ನಡೆಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.

ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ದ ಧ್ವನಿ ಎತ್ತಿದ್ದ ಸತೀಶ್ ಜಾರಕಿಹೋಳಿ ಡಿಕೆ ಶಿವಕುಮಾರ್ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಚಿವೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com