ಮೈಸೂರು : ತೈಲ ಬೆಲೆ ಏರಿಕೆ ಖಂಡಿಸಿ ಪ್ರಗತಿಪರ ಚಿಂತಕರ ವೇದಿಕೆಯಿಂದ ಪ್ರತಿಭಟನೆ

ತೈಲ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆಯಿಂದ ಮೈಸೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಕೋರ್ಟ್ ಎದುರಿನ ಮಹಾತ್ಮಾ ಗಾಂಧಿ ಪ್ರತಿಮೆಯ ಬಳಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ತೈಲ ಬೆಲೆ ಕಡಿಮೆ ಮಾಡುವಂತೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com