ಮೈಸೂರು : ವಿನಾಯಕನ ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ…!

ಮೈಸೂರು :  ಗಣೇಶ ವಿಸರ್ಜನೆ ವೇಳೆ ವಿತರಿಸಲಾದ ಪ್ರಸಾದವನ್ನು ಸೇವಿಸಿದ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ  ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಮಲ್ಲರಾಜಯ್ಯನ ಹುಂಡಿ ಗ್ರಾಮದಲ್ಲಿ  ನಡೆದಿದೆ.

ಸೋಮವಾರ ರಾತ್ರಿ ನದಿಯಲ್ಲಿ ಗಣೇಶ ಮೂರ್ತಿಯನ್ನ ವಿಸರ್ಜಿಸಲಾಗಿತ್ತು, ನಂತರ ನೀಡಲಾದ ಪ್ರಸಾದವನ್ನ ಸೇವಿಸಿ ಸುಮಾರು 40ಕ್ಕೂ ಹೆಚ್ಚು ಮಂದಿಗೆ ದಿಢೀರ್ ವಾಂತಿಯಾಗಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತಕ್ಷಣ ಅವರನ್ನ ನಂಜನಗೂಡು ಸರ್ಕಾರಿ ಆಸ್ಪತ್ರೆ ಹಾಗೂ ಮೈಸೂರಿನ  ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಈ ವಿಷಯದ ಬಗ್ಗೆ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com