Asia Cup : ಪಾಕ್ ವಿರುದ್ಧ ಭಾರತಕ್ಕೆ 8 ವಿಕೆಟ್ ಭರ್ಜರಿ ಜಯ : ಮಿಂಚಿದ ಭುವಿ, ರೋಹಿತ್

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಬುಧವಾರ ನಡೆದ ‘ಎ’ ಗುಂಪಿನ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಭಾರತ ಸೂಪರ್-4 ಹಂತಕ್ಕೆ ಕಾಲಿಟ್ಟಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನ ಓವರುಗಳಲ್ಲಿ 162ಕ್ಕೆ ಆಲೌಟ್ ಆಯಿತು. ಪಾಕಿಸ್ತಾನದ ಪರವಾಗಿ ಬಾಬರ್ ಆಜಮ್ 47 ಹಾಗೂ ಶೋಯೆಬ್ ಮಲಿಕ್ 43 ರನ್ ಗಳಿಸಿದರು. ಭಾರತದ ಪರವಾಗಿ ಭುವನೇಶ್ವರ್ ಕುಮಾರ್ 3, ಕೇದಾರ್ ಜಾಧವ್ 3, ಜಸ್ಪ್ರೀತ್ ಬುಮ್ರಾ 2 ಹಾಗೂ ಕುಲದೀಪ್ ಯಾದವ್ 1 ವಿಕೆಟ್ ಪಡೆದರು.

ಗುರಿಯನ್ನು ಬೆನ್ನತ್ತಿದ ಭಾರತ 29 ಓವರುಗಳಲ್ಲಿ 2 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ ಗೆಲುವಿನ ದಡ ಸೇರಿತು. ಟೀಮ್ ಇಂಡಿಯಾ ಪರವಾಗಿ ನಾಯಕ ರೋಹಿತ್ ಶರ್ಮಾ 52, ಶಿಖರ್ ಧವನ್ 46, ಅಂಬಾಟಿ ರಾಯುಡು 31 ಹಾಗೂ ದಿನೇಶ್ ಕಾರ್ತಿಕ್ 31 ರನ್ ಗಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com