ತ್ರಿವಳಿ ತಲಾಖ್​ ಶಿಕ್ಷಾರ್ಹ ಅಪರಾಧ : ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ….

ನವದೆಹಲಿ : ತ್ರಿವಳಿ ತಲಾಖ್​  ರದ್ಧತಿಗೆ ಹೊರಡಿಸಲಾಗಿರುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧುವಾರ ಅನುಮೋದನೆ ಸೂಚಿಸಿದೆ. ತ್ರಿವಳಿ ತಲಾಖ್​ ಶಿಕ್ಷಾರ್ಹ ಅಪರಾಧವೆಂದು ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಗೆ ಎರಡೂ ಸದನದಲ್ಲಿ ಒಪ್ಪಿಗೆ ಪಡೆಯಲು ಕೇಂದ್ರ ಸರ್ಕಾರ ವಿಫಲವಾಗಿತ್ತು. ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ತಿದ್ದುಪಡಿ ವಿಧೇಯಕಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ತರಲು ಒಪ್ಪಿಗೆ ನೀಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಅನುಮೋದನೆ ಸಿಕ್ಕಿತ್ತು. ಆದರೆ ತ್ರಿವಳಿ ತಲಾಖ್ ಮಸೂದೆಗೆ ತಿದ್ದುಪಡಿ ತಂದ ಸರ್ಕಾರ, ಜಾಮೀನು ಸಹಿತ ಅಪರಾಧ ಎಂದು ತಿದ್ದುಪಡಿ ಮಾಡಿತ್ತು.

4 thoughts on “ತ್ರಿವಳಿ ತಲಾಖ್​ ಶಿಕ್ಷಾರ್ಹ ಅಪರಾಧ : ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ….

Leave a Reply

Your email address will not be published.

Social Media Auto Publish Powered By : XYZScripts.com