ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಡಿಕೆಶಿ ಆರೋಗ್ಯ ವಿಚಾರಿಸಿದ ಸಿಎಂ..!

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಡಿಕೆಶಿ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ  ಭೇಟಿ ನೀಡಿ ಡಿಕೆಶಿ ಆರೋಗ್ಯ ವಿಚಾರಿಸಿದ್ದಾರೆ.

ಮೂರು ದಿನಗಳ ಹಿಂದೆ ಫುಡ್ ಪಾಯ್ಸನ್‍ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಡಿಕೆಶಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನ ಸಿಎಂ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಡಿಕೆಶಿ ಆರೋಗ್ಯ ವಿಚಾರಿಸಿದ್ರು. ಇನ್ನ ಡಿಕೆಶಿ ಇಂದು ಅಥವಾ ನಾಳೆ ಬೆಳಗ್ಗೆ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಹೈದರಾಬಾದ್ ನಿಂದ ಹೊರಟಿದ್ದ ವಿಮಾನದಲ್ಲಿ ಸ್ಯಾಂಡ್ ವಿಚ್ ತಿಂದ ಪರಿಣಾಮ ಸಚಿವ ಡಿಕೆಶಿ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿತ್ತು. ಇದರ ಪರಿಣಾಮ ಅಸ್ವಸ್ಥಗೊಂಡ ಶಿವಕುಮಾರ್ ಅವರಿಗೆ ವೈದ್ಯರು ಗ್ಲುಕೋಸ್ ಹಾಕಿ, ಚಿಕಿತ್ಸೆ ನೀಡಿದ್ದರು. ಸದ್ಯ ನಗರದ ಅಪೋಲೋ ಆಸ್ಪತ್ರೆಯಲ್ಲಿ ಡಿಕೆಶಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ವೈದ್ಯರು ತಿಳಿಸಿದ್ರು.

Leave a Reply

Your email address will not be published.

Social Media Auto Publish Powered By : XYZScripts.com