Asia Cup : ಬಾಂಗ್ಲಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗೆಲುವು : ಮಿಂಚಿದ ಜಡೇಜಾ, ರೋಹಿತ್

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾಕಪ್ ಟೂರ್ನಿಯ ಸೂಪರ್ – 4 ಹಂತದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ 7 ವಿಕೆಟ್ ಗಳಿಂದ ಜಯ ಸಾಧಿಸಿದೆ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಲಿಳಿದ ಬಾಂಗ್ಲಾದೇಶ 49.1 ಓವರುಗಳಲ್ಲಿ 173ಕ್ಕೆ ಆಲೌಟ್ ಆಯಿತು. ಭಾರತದ ಪರವಾಗಿ ರವೀಂದ್ರ ಜಡೇಜಾ 4, ಭುವನೇಶ್ವರ್ ಕುಮಾರ್ 3 ಹಾಗೂ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಪಡೆದರು.

ಗುರಿಯನ್ನು ಬೆನ್ನತ್ತಿದ ಭಾರತ ಓವರುಗಳಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿ ಜಯದ ನಗೆ ಬೀರಿತು. ಅಜೇಯ ಅರ್ಧಶತಕ ಬಾರಿಸಿದ ನಾಯಕ ರೋಹಿತ್ ಶರ್ಮಾ 83*, ಶಿಖರ್ ಧವನ್ 40 ಹಾಗೂ ಮಹೇಂದ್ರ ಸಿಂಗ್ ಧೋನಿ 33 ರನ್ ಬಾರಿಸಿದರು.

Leave a Reply

Your email address will not be published.