BJP ವಿರುದ್ಧ JDS ಕಾರ್ಯಕರ್ತರ​ ಪ್ರತಿಭಟನೆ : BSY ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ..!

ರಾಮನಗರ : ಬಿಜೆಪಿ ಅಪರೇಷನ್ ಕಮಲದ ಮೂಲಕ ಜೆಡಿಎಸ್- ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ಥಿತಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ಕರ್ಮಭೂಮಿ ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ರು.

ರಾಮನಗರದ ಐಜೂರು ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನೆ ನಡೆಸುತ್ತಿರುವ ಜೆಡಿಎಸ್ ಕಾರ್ಯಕರ್ತರು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಿಲೋ‌ ಮೀಟರ್ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿತ್ತು.

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅನಗತ್ಯವಾಗಿ ಅವಹೇಳನಕಾರಿಯಾಗಿ ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ.
ಸಮಿಶ್ರ ಸರ್ಕಾರವನ್ನ ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ವೇಳೆ ಯಡಿಯೂರಪ್ಪ ಭಾವ ಚಿತ್ರಕ್ಕೆ ಚಪ್ಪಲಿ ಏಟು ಹೊಡೆದು, ಅವ್ರ
ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ರು. ಬಿಜೆಪಿ ನಾಯಕರು ತಮ್ಮ ಸಣ್ಣತನದ ಹೇಳಿಕೆ ನೀಡುವುದನ್ನ ಬಿಡಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕಮಲ ಪಾಳಯಕ್ಕೆ ಎಚ್ಚರಿಕೆ ನೀಡಿದ್ರು.

Leave a Reply

Your email address will not be published.

Social Media Auto Publish Powered By : XYZScripts.com