ದಾವಣಗೆರೆ : ಮೂರು ಪಲ್ಟಿಯಾಗಿ ಗದ್ದೆಗೆ ಬಿದ್ದ ಕಾರ್ – ಅದೃಷ್ಟವಶಾತ್ ಪಾರಾದ ಪ್ರಯಾಣಿಕರು

ದಾವಣಗೆರೆ : ಡಿವೈಡರ್ ಗೆ ಡಿಕ್ಕಿಯಾದ ಕಾರೊಂದು ಮೂರು ಪಲ್ಟಿಯಾಗಿ ಗೆದ್ದೆಗೆ ಬಿದ್ದಿರುವ ಘಟನೆ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರ ಗಾಜಿನ ಮನೆ ಬಳಿ ನಡೆದಿದೆ. ಅದೃಷ್ಠವಶಾತ್ ಐವರು ಪ್ರಯಾಣಿಕರು ಪಾರಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹರಿಹರದಿಂದ ದಾವಣಗೆರೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಡಿಕ್ಕಿಯಾಗಿ ನಂತರ ಸ್ಕಾರ್ಪಿಯೋ ಕಾರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published.