ವರುಣನ ಅಬ್ಬರದಿಂದ ಸಿಲಿಕಾನ್​ ಸಿಟಿ ಜಲಾವೃತ : ಜನರ ಪರದಾಟ..!

ಬೆಂಗಳೂರು : ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ಸಂಪೂರ್ಣ ಜಲಾವೃತಗೊಂಡಿದ್ದು, ಗಾಡಿಗಳು ನೀರಿನಲ್ಲಿ ಮುಳುಗಿ ಹೋಗಿದ್ದು, ಜನರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ಮಳೆಯ ಜೊತೆಗೆ ಗುಡುಗು, ಮಿಂಚು ಹಾಗೂ ಭಾರೀ ಮಳೆಗೆ ಓಕಳೀಪುರಂ, ನಾಯಂಡಹಳ್ಳಿ, ನಂದಿನಿಲೇಔಟ್, ಮಲ್ಲೇಶ್ವರಂ, ಮತ್ತಿಕೆರೆ ಭಾಗಗಳು ಅಕ್ಷರಶಃ ಜಲಾವೃತಗೊಂಡಿತ್ತು. ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. ಅಲ್ಲದೆ ಜಯನಗರ, ಮಾರೇನಹಳ್ಳಿ, ಜೆಪಿನಗರ, ಡಾಲರ್ಸ್ ಕಾಲೋನಿ, ಗೊಟ್ಟಿಗೆರೆಯಲ್ಲಿ ತಗ್ಗು ಪ್ರದೇಶದ 350ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನ ರಾತ್ರಿಯೆಲ್ಲಾ ಜಾಗರಣೆ ಮಾಡುವಂತಾಗಿತ್ತು.

ಇನ್ನ ಮತ್ತಿಕೆರೆಯಲ್ಲಿ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿತ್ತು. ಮಳೆಯಿಂದಾಗಿ ವಿದ್ಯುತ್ ಸಂಪರ್ಕವೂ ಇಲ್ಲದೇ ವಾಹನ ಸವಾರರು, ಸ್ಥಳೀಯರು ಪರದಾಡಿದ್ದು, ಮಳೆಯ ನಡುವೆ ಸ್ಥಳೀಯರೇ ಮರ ತೆರವು ಕಾರ್ಯದಲ್ಲಿ ತೊಡಗಿದ್ದರು. ಮಳೆಯಿಂದಾಗಿ ರಸ್ತೆಯೆಲ್ಲಾ ಕೆರೆಯಂತಾಗಿತ್ತು ಕಾಣುತ್ತಿದೆ.

ಇಂದೂ ಕೂಡ ಮಳೆ ಮುಂದುವರಿಯುವುದು ಎಂದು ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು ನಗರದ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಮಳೆಯಾಗಲಿದೆ, ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಇದೇ ರೀತಿ ಮಳೆಯ ಮುನ್ಸೂಚನೆ ಇದೆ, ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ, ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಿಂದ ಎರಡೂ ಕಡೆಯ ತೇವಾಂಶ ಮಿಶ್ರಿತ ಗಾಳಿ ಒಂದೆಡೆ ಸೇರಿ ಗಾಳಿಯ ಒತ್ತಡದಿಂದ ಹೆಚ್ಚು ಮಳೆಯಾಗುತ್ತದೆ. ಸೆಪ್ಟೆಂಬರ್‌ ತಿಂಗಳ ಅಂತ್ಯದವರೆಗೂ ಇದೇ ರೀತಿ ಮಳೆಯ ಮುನ್ಸೂಚನೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿ

 

 

 

Leave a Reply

Your email address will not be published.