‘ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ’ ಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಆಯ್ಕೆ

ಬೆಂಗಳೂರು, ಸೆ. 25- ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ 2018ನೇ ಸಾಲಿಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಕಟಿಸಿದರು. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ಹುಣಸವಾಡಿ ರಾಜನ್, ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ ಈ ಸಮಿತಿಯ ಸದಸ್ಯರಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಸದಸ್ಯ ಕಾರ್ಯದರ್ಶಿಗಳಾಗಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೀಡಲಾಗುವ ಈ ಪ್ರಶಸ್ತಿ 5 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದ್ದು, ಗಾಂಧೀ ಜಯಂತಿ ದಿನದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ವರೆಗೆ ಈ ಪ್ರಶಸ್ತಿಗೆ ಹಿರಿಯ ಗಾಂಧೀವಾದಿಗಳಾದ ಎಸ್.ಎನ್. ಸುಬ್ಬರಾವ್, ಹೋ. ಶ್ರೀನಿವಾಸಯ್ಯ, ಚನ್ನಮ್ಮ ಹಳ್ಳಿಕೇರಿ ಹಾಗೂ ಹೆಚ್.ಎಸ್. ದೊರೆಸ್ವಾಮಿ ಅವರು ಆಯ್ಕೆಯಾಗಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com