‘ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಆತ್ಮಹತ್ಯೆಗಳು ಹೆಚ್ಚುತ್ತಿದೆ’ : ಶ್ರೀರಾಮುಲು

ನಾಯಕಹಳ್ಳಿ : ‘ಸರ್ಕಾರ ರೈತರನನ್ನು ನಿರ್ಲಕ್ಷ್ಯಿಸುತ್ತಿದೆ, ಅದಕ್ಕೆ ಅನ್ನದಾತರ ಆತ್ಮಹತ್ಯೆ ಸಂಖ್ಯೆ ಹೆಚ್ಚುತ್ತಿದೆ. ರೈತರ ಸಾಲ ಮನ್ನಾ ಮಾಡಿರುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳುತ್ತಿದ್ದರೂ ಅದು ಇನ್ನೂ ಜಾರಿಗೆ ಬಂದಿಲ್ಲ. ಎಂದು ಸರ್ಕಾರದ ವಿರುದ್ಧ ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಆರೋಪಿಸಿದ್ರು.

 

ಮಲ್ಲೂರಹಳ್ಳಿ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಶ್ರಿರಾಮುಲು, ‘ಚಿತ್ರದುರ್ಗ ಜಿಲ್ಲೆ ಸೇರಿ ರಾಜ್ಯದ ಹಲವಾರು ಭಾಗಗಳಲ್ಲಿ ಭೀಕರ ಬರ ಉಂಟಾಗಿದೆ. ರಾಜ್ಯ ಸರ್ಕಾರ ರೈತರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸ ಮಾಡುತ್ತಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿದೆ’ ಎಂದು ಕಿಡಿಕಾರಿದ್ರು.

 

Leave a Reply

Your email address will not be published.

Social Media Auto Publish Powered By : XYZScripts.com