ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಮತವಿಲ್ಲ, ನಮ್ಮ ಶಾಸಕರು ಆಲ್ ಇಜ್ ವೆಲ್ : ಸಚಿವ ಡಿಕೆಶಿ

‘ ರಾಜ್ಯದ ಒಂದೇ ಒಂದು ಹನಿ ನೀರು ಸಮುದ್ರ ಸೇರಲು ಬಿಡುವುದಿಲ್ಲ ‘ ಎಂದು ರಾಜ್ಯ ಸಮ್ಮಿಶ್ರ ಸರ್ಕಾರದ ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮತಾನಾಡಿದ ಅವರು ‘ ನಾನು ಮಹದಾಯಿ ಉಗಮ ಸ್ಥಾನ ಕಣಕುಂಬಿಗೆ ಇಂದು ಭೇಟಿ ನೀಡುತ್ತಿದ್ದೇನೆ. ಮಹಾದಾಯಿ ವಿಚಾರವಾಗಿ ನಮಗೆ ಅನ್ಯಾಯವಾಗಿದೆ‌. ಮರು ಪರಿಶೀಲನೆ ಅರ್ಜಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ‘ ಎಂದಿದ್ದಾರೆ.

‘ ಈ ನಮ್ಮ ಪಾಲಿನ ನೀರು ಪಡೆಯಲು ಕಾನೂನಾತ್ಮಕ ಅಭಿಪ್ರಾಯ ಕೇಳಿದ್ದೇವೆ. ಮಹಾದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ನ್ಯಾಯಾಧೀಕರಣದ ತೀರ್ಪನ್ನು ನಂಬಿ ಸುಮ್ಮನೆ ಕುಳಿತಿಲ್ಲ. ಕಾನೂನು ತಜ್ಞರು ಹಾಗು ತಾಂತ್ರಿಕ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ‘ ಎಂದಿದ್ದಾರೆ.

‘ ಕಾವೇರಿ ಬಗ್ಗೆ ಇರುವ ಕಾಳಜಿ ಮಹಾದಾಯಿಗೆ ಇಲ್ಲ ಎನ್ನುವುದು ಸತ್ಯಕ್ಕೆ ದೂರವಾದುದು. ನಮಗೆ ಮಹಾದಾಯಿ ವಿಚಾರದಲ್ಲಿ ಸರಿಯಾದ ನ್ಯಾಯ ಸಿಕ್ಕಿಲ್ಲ. ಇಂದಿನ ಭೇಟಿ ಬಳಿಕ ಸರ್ವ ಪಕ್ಷಗಳ ಸಭೆ ಕರೆಯಲಾಗುವುದು. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲಾ. ನಮ್ಮ ಶಾಸಕರು ಆಲ್ ಇಜ್ ವೆಲ್ ಎವರಥಿಂಗ್ ಇಸ್ ಒಕೆ ‘ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Leave a Reply

Your email address will not be published.