ದೆಹಲಿ : ಮೂರಂತಸ್ತಿನ ಕಟ್ಟಡ ಕುಸಿತ : 2 ಮಕ್ಕಳು ಸಾವು, 8 ಮಂದಿಗೆ ಗಂಭೀರ ಗಾಯ

ದೆಹಲಿ : ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಅಶೋಕ್‌ ವಿಹಾರ್‌ ಪ್ರದೇಶದಲ್ಲಿ  ನಡೆದಿದೆ.

ಈ ವಿಷಯ ತಿಳಿದು ಸ್ಥಳಕ್ಕಾಗಾಮಿಸಿದ ರಕ್ಷಣಾ ಸಿಬ್ಬಂದಿಗಳು ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿದ್ದು  ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com