ಅಪಘಾತದಿಂದ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ ಸಿಎಂ ಪುತ್ರ..! 

ಮಂಡ್ಯ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರನ್ನು ಸಿಎಂ ಪುತ್ರ ನಿಖಿಲ್​ ಕುಮಾರಸ್ವಾಮಿ ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಗುತ್ತಲಪುರ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ ಅಲ್ಲಿದ್ದ ಜನರಿಗೆ ನಾಲ್ವರನ್ನು ಬಲಿತೆಗೆದುಕೊಂಡಿದ್ದು, ಹತ್ತು ಮಂದಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಮನೆಗೆ ನಿಖಿಲ್​ ಭೇಟಿ ನೀಡಿ ಸಾಂತ್ವಾನ  ಹೇಳಿ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಿದ ಸಿಎಂ ಪುತ್ರ ಭಾವುಕರಾಗಿ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

ಬಳಿಕ ಮಾತನಾಡಿದ ನಿಖಿಲ್, ಇಂದು ಕುಮಾರಸ್ವಾಮಿ ಅವರು ಬರಬೇಕಿತ್ತು. ಆದರೆ ಕೆಲಸದ ಒತ್ತಡದಿಂದ ಬರಲು ಸಾಧ್ಯವಾಗಿಲ್ಲ. ಅವರ ಪರವಾಗಿ ನಾನು ಜವಬ್ದಾರಿಯನ್ನು ವಹಿಸಿ ಬಂದು ಭೇಟಿ ಮಾಡಿ ಸಾಂತ್ವಾನ ಹೇಳಿದ್ದೇನೆ. ಈಗಾಗಲೇ ಸರ್ಕಾರ ಮೃತ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಣ ಘೋಷಿಸಿದೆ. ಜೊತೆಗೆ ಗಾಯಾಳುಗಳಿಗೆ ಚಿಕಿತ್ಸೆಯನ್ನೂ ಕೊಡಿಸಲಾಗುತ್ತದೆ ಎಂದು ತಿಳಿಸಿದ್ರು. ಇನ್ನು ಮೃತ ಕುಟುಂಬದವರಿಗೆ ನಿಖಿಲ್ ಕುಮಾರಸ್ವಾಮಿ ವೈಯಕ್ತಿಕವಾಗಿ ತಲಾ 1 ಲಕ್ಷ ಪರಿಹಾರ ನೀಡಿದ್ದಾರೆ. ಉದ್ಯೋಗದ ಭರವಸೆ ಕೂಡ ನೀಡಿದ್ದಾರೆ. ನಂತರ ಮಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

 

 

Leave a Reply

Your email address will not be published.

Social Media Auto Publish Powered By : XYZScripts.com