ರಾಜ್ಯದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಇಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಿಲ್ಲ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ಕೊನೆಗಾದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿತಗೊಳಿಸಿದೆ. ಕೇಂದ್ರ ಸರ್ಕಾರ ತೆರಿಗೆ ಕಡಿತ ಗೊಳಿಸುವ ಮುನ್ನವೇ ನಾವು ತೆರಿಗೆಯನ್ನು ಕಡಿತಗೊಳಿಸಿದ್ದೇವೆ. ಈಗಲಾದರೂ ದೇಶದ ಜನರ ಮೇಲಾಗುತ್ತಿರುವ ಹೊರೆಯನ್ನು ಮನಗಂಡು ಕೇಂದ್ರ ಸರ್ಕಾರ ತೆರಿಗೆ ಕಡಿತಗೊಳಿಸಿದೆ. ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಆದರೆ ರಾಜ್ಯದಲ್ಲಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com