ಜಮಖಂಡಿಯಲ್ಲಿ ನಿರಾಣಿ ಕುಟುಂಬದಿಂದ ಸ್ಪರ್ಧೆ ಇಲ್ಲ : ಮುರುಗೇಶ್ ನಿರಾಣಿ ಸ್ಪಷ್ಟನೆ

ಬೆಂಗಳೂರು : ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಹೋದರ ಸಂಗಮೇಶ್ ನಿರಾಣಿ ಸೇರಿದಂತೆ ತಮ್ಮ ಕುಟಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಅವರ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಜಮಖಂಡಿ ಕ್ಷೇತ್ರದಿಂದ ಪರಾಜಿತ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ,ಜಿಎಸ್ ನ್ಯಾಮಗೌಡ,ಉಮೇಶ್ ಮಹಾಬಲ ಶೆಟ್ಟಿ,ಬಸವರಾಜ್ ಸಿಂಧೂರ ಆಕಾಂಕ್ಷಿಗಳಾಗಿದ್ದಾರೆ,ಆಕಾಂಕ್ಷಿಗಳು‌ ಹಾಗು ಜಿಲ್ಲೆಯ ನಾಯಕರೊಂದಿಗೆ ಯಡಿಯೂರಪ್ಪ ಈಗಾಗಲೇ ಮಾತುಕತೆ ನಡೆಸಿದ್ದಾರೆ.ಇವರಲ್ಲಿ ಯಾವುದೇ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೂ ನಮ್ಮ ಆಕ್ಷೇಪಣೆ ಇಲ್ಲ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದರು.

ಸಹೋದರ ಸಂಗಮೇಶ್ ನಿರಾಣಿ ಜಮಖಂಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ, ನಮ್ಮ ಕುಟುಂಬದಿಂದ ಈ ಬಾರಿ ಯಾರೂ ಸ್ಪರ್ಧೆ ಮಾಡುವುದಿಲ್ಲ ಈ ವಿಚಾರವನ್ನು ಜಿಲ್ಲಾ ಮುಖಂಡರ ಸಮ್ಮುಖದಲ್ಲಿಯೇ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದೇನೆ,ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.ಯಾರಿಗೇ ಟಿಕೆಟ್ ನೀಡಿದರೂ ಸಂಗಮೇಶ್ ನಿರಾಣಿ ಹಾಗು ನಾವು ಪಕ್ಷದ ಅಧಿಕೃತ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ ಎಂದರು.

Leave a Reply

Your email address will not be published.

Social Media Auto Publish Powered By : XYZScripts.com