ಉಪಚುನಾವಣೆಯಲ್ಲಿ ಖಂಡಿತವಾಗಿಯೂ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಆರ್.ವಿ ದೇಶಪಾಂಡೆ

ಹುಬ್ಬಳ್ಳಿ : ‘ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಖಂಡಿತವಾಗಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ‘ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ, ‘ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ ಆಗಲಿದೆ, ಜಮಖಂಡಿಯಲ್ಲಿ ಖಂಡಿತವಾಗಿಯೂ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ. ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಖಚಿತ ‘ ಎಂದು ಹೇಳಿದ್ದಾರೆ.

ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದೆ.

 

 

 

Leave a Reply

Your email address will not be published.

Social Media Auto Publish Powered By : XYZScripts.com