ಕಾರಂಜಾ ಯೋಜನೆ ಸಂತ್ರಸ್ತರಿಗೆ ಶೀಘ್ರ ಪರಿಹಾರ : ಸಿಎಂ ಕುಮಾರಸ್ವಾಮಿ ಭರವಸೆ

ಬೆಂಗಳೂರು, ಅ. 15: ಕಾರಂಜಾ ಯೋಜನೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕಾರಾಂಜ ಯೋಜನೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಬೇಕೆಂದು ಹೋರಾಟ ನಡೆಸುತ್ತಿರುವ ರೈತ ಮುಖಂಡರು ಹಾಗೂ ಆ ಭಾಗದ ಜನಪ್ರತಿನಿಧಿಗಳ ಜತೆ ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ಆಶ್ವಾಸನೆ ನೀಡಿದರು.

ಈಗ ರೈತ ಮುಖಂಡರು ತಮ್ಮಸಮಸ್ಯೆಗಳನ್ನು ನಿವೇದಿಸಿಕೊಂಡಿದ್ದಾರೆ. ಅವರ ಆಹವಾಲುಗಳ ಬಗ್ಗೆ ಬೀದರ್ ಜಿಲ್ಲೆಯ ಸಚಿವರು, ಜಲ ಸಂಪನ್ಮೂಲ ಸಚಿವರು, ಜನಪ್ರತಿನಿಧಿಗಳು, ಹಾಗೂ ನಾನಾ ಇಲಾಖೆಯ ಅಧಿಕಾರಿಗಳ ಜತೆ ಮತ್ತೊಂದು ಸುತ್ತು ಸಮಾಲೋಚನೆ ನಡೆಸಲಾಗುವುದು. ಯಾವ ರೀತಿ ಪರಿಹಾರ ನೀಡಬೇಕೆಂಬುದರ ಬಗ್ಗೆ ಕೂಲಂಕಷ ಚರ್ಚೆ ನಡೆಸಿ, ಪರಿಹಾರ ಸ್ವರೂಪ ರೂಪಿಸಲಾಗುವುದು. ನಂತರ ನಾಲ್ಕೈದು ಮಂದಿ ರೈತ ಮುಖಂಡರನ್ನು ಕರೆದು ಅವರೊಂದಿಗೂ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಇದಕ್ಕೆ ಮೊದಲು ರೈತ ಮುಖಂಡರ ಜತೆ ಸುದೀರ್ಘ ಮಾತುಕತೆ ನಡೆಸಿದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ರೈತರ ಅಹವಾಲುಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಕಾನೂನು ಚೌಕಟ್ಟಿನೊಳಗೆ ಅವರಿಗೆ ನ್ಯಾಯಬದ್ಧವಾಗಿ ಬರಬೇಕಾದ ಪರಿಹಾರ ಕಲ್ಪಿಸಲಾಗುವುದು. ರೈತರು ಕೂಡ ಸಹಕರಿಸಬೇಕು ಎಂದು ಮನವಿ ಮಾಡಿದರು.

ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ, ಸಚಿವ ರಾಜಶೇಖರ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸ್ಥಳೀಯ ಸಂಸದರು, ಶಾಸಕರು, ರೈತ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.

4 thoughts on “ಕಾರಂಜಾ ಯೋಜನೆ ಸಂತ್ರಸ್ತರಿಗೆ ಶೀಘ್ರ ಪರಿಹಾರ : ಸಿಎಂ ಕುಮಾರಸ್ವಾಮಿ ಭರವಸೆ

Leave a Reply

Your email address will not be published.

Social Media Auto Publish Powered By : XYZScripts.com