Cricket : ರೋಹಿತ್ – ಕೊಹ್ಲಿ ಶತಕಗಳ ಅಬ್ಬರ : ವಿಂಡೀಸ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗೆಲುವು

ಗುವಾಹಟಿಯ ಬರ್ಸಾಪಾರಾ ಕ್ರಿಕೆಟ್ ಮೈದಾನದಲ್ಲಿ ರವಿವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಕೊಹ್ಲಿಪಡೆ 5 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 50 ಓವರುಗಳಲ್ಲಿ 8 ವಿಕೆಟ್ ಕಳೆದುಕೊಂಡು 322  ರನ್ ಬೃಹತ್ ಮೊತ್ತ ಕಲೆಹಾಕಿತು. ಭಾರತದ ಪರವಾಗಿ ಯಜುವೇಂದ್ರ ಚಹಲ್ 3, ಮೊಹಮ್ಮದ್ ಶಮಿ 2, ರವೀಂದ್ರ ಜಡೇಜಾ 2 ಹಾಗೂ ಖಲೀಲ್ ಅಹ್ಮದ್ 1 ವಿಕೆಟ್ ಪಡೆದರು.

ಗುರಿಯನ್ನು ಬೆನ್ನತ್ತಿದ ಭಾರತ 42.1 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿ ಗೆಲುವಿನ ದಡ ಸೇರಿತು. ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ 246 ರನ್ ಜೊತೆಯಾಟವಾಡಿದರು.

20ನೇ ಏಕದಿನ ಶತಕ ಬಾರಿಸಿದ ರೋಹಿತ್ ಶರ್ಮಾ 117 ಎಸೆತಗಳಲ್ಲಿ 15 ಬೌಂಡರಿ ಹಾಗೂ 8 ಸಿಕ್ಸರ್ ಗಳನ್ನೊಳಗೊಂಡ ಅಜೇಯ 152 ರನ್ ಗಳಿಸಿದರು. 36ನೇ ಏಕದಿನ ಶತಕ ಬಾರಿಸಿದ ನಾಯಕ ವಿರಾಟ್ ಕೊಹ್ಲಿ 107 ಎಸೆತಗಳಲ್ಲಿ 21 ಬೌಂಡರಿ ಹಾಗೂ 2 ಸಿಕ್ಸರ್ ಗಳನ್ನೊಳಗೊಂಡ 140 ರನ್ ಗಳಿಸಿದರು.

 

 

 

Leave a Reply

Your email address will not be published.

Social Media Auto Publish Powered By : XYZScripts.com