ರಾಮನಗರ ಉಪಚುನಾವಣೆ : ಅನಿತಾ ಕುಮಾರಸ್ವಾಮಿ ಗೆಲ್ಲಿಸಲು ಜೆಡಿಎಸ್-ಕಾಂಗ್ರೆಸ್ ಸಂಕಲ್ಪ

ರಾಮನಗರ ವಿಧಾನಸಭೆ ಕ್ಷೇತ್ರದ ಮರುಚುನಾವಣೆಯಲ್ಲಿ ಸಮ್ಮಿಶ್ರ ಸರಕಾರದ ಒಕ್ಕೊರಲ ಅಭ್ಯರ್ಥಿ ಜೆಡಿಎಸ್ನ ಅನಿತಾ ಕುಮಾರಸ್ವಾಮಿ ಅವರನ್ನು ಶತಾಯ-ಗತಾಯ ಗೆಲ್ಲಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಭೆ ಸಂಕಲ್ಪ ಮಾಡಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ, ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ಸಿನ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಕಳೆದ ಚುನಾವಣೆಯ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ನ ಇಕ್ಬಾಲ್ ಹುಸೇನ್ ಹಾಗೂ ಉಭಯ ಪಕ್ಷಗಳ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕೋಮುವಾದಿ ಬಿಜೆಪಿಯನ್ನು ರಾಜ್ಯ ಹಾಗೂ ಕೇಂದ್ರದಲ್ಲಿ ದೂರವಿಡಲು ಜಾತ್ಯತೀತ ಶಕ್ತಿಗಳು ಒಂದಾಗುವುದು ಅನಿವಾರ್ಯವಾಗಿದೆ. ಹೀಗಾಗಿ ಉಭಯ ಪಕ್ಷಗಳ ಮುಖಂಡರು ಉದ್ದೇಶಿತ ಗುರಿ ಸಾಧನೆಗೆ ಶಕ್ತಿ ಮೀರಿ ಶ್ರಮಿಸಬೇಕೆಂಬ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

Leave a Reply

Your email address will not be published.

Social Media Auto Publish Powered By : XYZScripts.com