Cricket : ವಿಶಾಖಪಟ್ಟಣದಲ್ಲಿಂದು 2ನೇ ಏಕದಿನ ಪಂದ್ಯ – ದಾಖಲೆಗಳ ಹೊಸ್ತಿಲಲ್ಲಿ ವಿರಾಟ್, ರೋಹಿತ್

ವಿಶಾಖಪಟ್ಟಣದ ವೈ.ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ಬುಧವಾರ ಭಾರತ ಹಾಗೂ ವೆಸ್ಟ್ಇಂಡೀಸ್ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು 8 ವಿಕೆಟ್ ಗಳಿಂದ ಜಯಿಸಿರುವ ಭಾರತ, ಎರಡನೇ ಏಕದಿನ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ ಕೆರೆಬಿಯನ್ ಬಳಗ ಕೊಹ್ಲಿಪಡೆಗೆ ತಿರುಗೇಟು ನೀಡುವ ತವಕದಲ್ಲಿದೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ದಾಖಲೆಗಳ ಹೊಸ್ತಿಲಲ್ಲಿದ್ದಾರೆ. ವಿರಾಟ್ ಕೊಹ್ಲಿ ಇನ್ನು 81 ರನ್ ಗಳಿಸಿದರೆ ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ 10,000 ರನ್ ಗಡಿ ದಾಟಲಿದ್ದಾರೆ. ಕ್ಯಾಪ್ಟನ್ ವಿರಾಟ್ ಕೊಹ್ಲಿ ಖಾತೆಯಲ್ಲಿ ಸದ್ಯ 9919 ರನ್ ಗಳಿವೆ.

ರೋಹಿತ್ ಶರ್ಮಾ ಇನ್ನು 2 ಸಿಕ್ಸರ್ ಸಿಡಿಸಿದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿಂದಿಕ್ಕಲಿದ್ದಾರೆ. ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಸಚಿನ್ ತೆಂಡೂಲ್ಕರ್ 195 ಸಿಕ್ಸರ್ ಬಾರಿಸಿದ್ದರೆ, ರೋಹಿತ್ ಶರ್ಮಾ 194 ಸಿಕ್ಸರ್ ಸಿಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com