Darshan accident : ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ details ಇಲ್ಲಿದೆ…

ನಟ ದರ್ಶನ್ ಕಾರು ಅಪಘಾತ: ಯಾರ ವಿರುದ್ದ ಕ್ರಮಕ್ಕೆ ಪೊಲೀಸರು ಮನವಿ ಮಾಡಿದ್ದಾರೆ ಗೊತ್ತೆ..?

ಮೈಸೂರಿನಲ್ಲಿ ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಪುರಂ ಸಂಚಾರ ಠಾಣಾ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ತಪ್ಪಿತಸ್ಥ ಕಾರು ಚಾಲಕ ಆಂಟೋನಿ ರಾಯ್‌ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.


ಮೈಸೂರಿನ 4ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವ ಪೊಲೀಸರು, ಅಪಘಾತದ ಮಾಹಿತಿಯನ್ನ ಚಾರ್ಜ್‌ಶೀಟ್‌ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸೆ.23ರಂದು ನಟ ದರ್ಶನ್‌ ಕಾರು ಅಪಘಾತಕ್ಕಿಡಾಗಿದೆ. ಅಪಘಾತದ ವೇಳೆ ಆ ಕಾರನ್ನ ಅವರ ಗೆಳೆಯ ಆಂಟೋನಿ ರಾಯ್‌ ಚಾಲನೆ ಮಾಡುತ್ತಿದ್ದರು. ರಿಂಗ್‌ರಸ್ತೆಯ ಜಂಕ್ಷನ್‌ ಬಳಿ ರಾಯ್‌ ಅವರ ನಿರ್ಲಕ್ಷ್ಯತನದಿಂದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಈ ನಂತರ ಕಾರಿನಲ್ಲಿದ್ದ 5 ಮಂದಿಗೆ ಗಾಯಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಸಮಯದಲ್ಲಿ ದರ್ಶನ್‌ರಿಗೆ ಸಹಾಯ ಮಾಡಲು ಬಂದ ವ್ಯಕ್ತಿಯೋಬ್ಬರು ಆಯತಪ್ಪಿ ಬಿದ್ದು ಅವರಿಗೂ ಗಾಯಗಳಾಗಿದೆ. ಅವರು ಸಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕಾರನ್ನ ಸರ್ಕಾರಿ ಆರ್‌ಟಿಓ ಅಧಿಕಾರಿಗಳು ಪರಿಶೀಲಿಸಿದ್ದು ಯಾವುದೇ ತಾಂತ್ರಿಕ ಕಾರಣದಿಂದ ಅಪಘಾತ ಆಗಿಲ್ಲ ಎಂದು ವರದಿ ನೀಡಿದ್ದಾರೆ. ಘಟನೆ ಸಂಬಂಧ ನಟರಾದ ದರ್ಶನ್‌, ದೇವರಾಜ್‌, ಪ್ರಜ್ವಲ್‌ದೇವರಾಜ್‌ ಚಾಲಕ ಆಂಟೋನಿ, ಕಾರಿನಲ್ಲಿದ್ದ ಪ್ರಕಾಶ್‌ ಎಂಬುವ ಹೇಳಿಕೆ ಪಡೆಯಲಾಗಿದೆ. ಎಲ್ಲರ ಹೇಳಿಕೆಯಲ್ಲು ಆಂಟೋನಿಯವರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಸಹಜ ಅಭಿಪ್ರಾಯ ಬಂದಿದೆ. ಹೀಗಾಗಿ ತಪ್ಪಿತಸ್ಥ ಚಾಲಕ ಆಂಟೋನಿ ರಾಯ್‌ ವಿರುದ್ದ ಕಾನೂನಿ ಪ್ರಕಾರ ಶಿಕ್ಷೆ ವಿಧಿಸಬೇಕು ಎಂದು ಚಾರ್ಜ್ ಶೀಟ್ ನಲ್ಲಿ ವಿವಿಪುರಂ ಸಂಚಾರ ಠಾಣಾ ಪೊಲೀಸರು ಮನವಿ ಮಾಡಿದ್ದಾರೆ.

One thought on “Darshan accident : ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ details ಇಲ್ಲಿದೆ…

Leave a Reply

Your email address will not be published.