By Election : ಶಾಂತಿಯುತವಾಗಿ ಮುಕ್ತಾಯವಾದ ಮತದಾನ…6ಕ್ಕೆ ಫಲಿತಾಂಶ..

ರಾಜ್ಯದಲ್ಲಿ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಮತದಾನ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಳ್ಳಾರಿ ಲೋಕಸಭಾ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆ ವೇಳೆಗೆ ಶೆ. 56ರಷ್ಟು ಮತದಾನವಾಗಿದೆ. ಶಿವಮೊಗ್ಗ ಲೋಕಸಭಾ ಚುನಾವಣೆಗೆ 5ಗಂಟೆಯವರೆಗೆ 59ರಷ್ಟು ಮತದಾನ ಆಗಿದೆ.


ಜಮಖಂಡಿ ವಿಧಾನಸಭಾ ಉಪಚುನಾವಣೆಗೆ ಶೇ 74.41ರಷ್ಟು ಮತದಾನವಾಗಿದ್ರೆ, ರಾಮನಗರದಲ್ಲಿ ಸಂಜೆ 5 ಗಂಟೆ ವೇಳೆಗೆ 67.22ರಷ್ಟು ಮತದಾನವಾಗಿದೆ. ಮಂಡ್ಯದಲ್ಲಿ ಶೇ.49ರಷ್ಟು ಮತದಾನವಾಗಿದೆ ಇನ್ನು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ನವೆಂಬರ್ 6ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಈ ಚುನಾವಣೆಯ ಫಲಿತಾಂಶ ಮುಂದಿನ ಲೋಕಸಭೆಯ ಚುನಾವಣೆಗೆ ಮುನ್ನಡಿ ಬರೆಯಲಿದೆ…

Leave a Reply

Your email address will not be published.

Social Media Auto Publish Powered By : XYZScripts.com