High court : ನ್ಯಾಯಾಧೀಶರಾಗಿ 7 ಹೆಚ್ಚುವರಿ ನ್ಯಾಯಾಧೀಶರಾಗಿ 5 ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾಗಿ 7ಮಂದಿ ಹೆಚ್ಚುವರಿ ನ್ಯಾಯಾಧೀಶರಾಗಿ ಐವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಕರ್ನಾಟಕ ಉಚ್ಛ ನ್ಯಾಯಲಯದಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ ಕೆಂಪಯ್ಯ ಸೋಮಶೇಖರ್, ಕೊಟ್ರವ್ವ ಸೋಮಪ್ಪ ಮುದುಗಲ್, ಶ್ರೀನಿವಾಸ್ ಹರೀಶ್ ಕುಮಾರ್, ಜಾನ್ ಮೈಕೇಲ್ ಕುನ್ನಾ, ಬಸವರಾಜ್ ಅಂದಾನಗೌಡ ಪಾಟೀಲ್, ನಂಗಲಿ ಕೃಷ್ಣರಾವ್ ಸುಧೀಂದ್ರ ರಾವ್ ಮತ್ತು ಹೊಸೂರ್ ಭುಜಂಗರಾಯ ಪ್ರಭಾಕರ್ ಶಾಸ್ತ್ರಿ ಅವರನ್ನು ಒಳಗೊಂಡಂತೆ ಏಳು ಮಂದಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.

 

 

ಹಾಗೆಯೇ ಅಶೋಕ್ ಗೋಲಪ್ಪ ನಿಜಗಣ್ಣನವರ್, ಹೇತೂರ್ ಪುಟ್ಟಸ್ವಾಮಿಗೌಡ ಸಂದೇಶ್, ಪ್ರಹ್ಲಾದರಾವ್ ಗೋವಿಂದರಾವ್ ಮುತಾಲಿಕ್ ಪಾಟೀಲ್ ಮತ್ತು ಅಪ್ಪಾಸಾಹೇಬ್ ಶಾಂತಪ್ಪ ಬೆಳ್ಳುಂಕೆ ಅವರೂ ಸೇರಿದಂತೆ ಐದು ಮಂದಿ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಈ ಎಲ್ಲಾ ಮಹನೀಯರಿಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯಹಾರಗಳ ಸಚಿವ ಕೃಷ್ಣ ಬೈರೇಗೌಡ, ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಉಚ್ಛ ನ್ಯಾಯಾಲಯವೂ ಸೇರಿದಂತೆ ವಿವಿಧ ಅಧೀನ ನ್ಯಾಯಾಲಯಗಳಲ್ಲಿನ ನ್ಯಾಯಾಧೀಶರು ಮತ್ತು ಅಧಿಕಾರಿಗಳು, ನ್ಯಾಯಾಂಗ ಉಚ್ಛ ನ್ಯಾಯಲಯ ಮತ್ತು ಇತರೆ ನ್ಯಾಯಾಲಯಗಳಲ್ಲಿನ ಹಿರಿಯ ಹಾಗೂ ಕಿರಿಯ ವಕೀಲರು ಈ ವಿಶೇಷ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

ಈ ಮುನ್ನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್ ಅವರು ರಾಷ್ಟ್ರಪತಿ ಭವನದಿಂದ ಸ್ವೀಕೃತವಾದ ನೇಮಕಾತಿ ಆದೇಶವನ್ನು ವಾಚಿಸಿದರು.

Leave a Reply

Your email address will not be published.