#MeToo : ಲೈಂಗಿಕ ಕಿರುಕುಳ ಪ್ರಕರಣ – ವಿಚಾರಣೆಗೆ ಹಾಜರಾಗಲು ನಟ ಅರ್ಜುನ್ ಸರ್ಜಾಗೆ ನೋಟಿಸ್

ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ಅವರು ದಾಖಲಿಸಿದ ದೂರಿನ ಹಿನ್ನೆಲೆಯಲ್ಲಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಅರ್ಜುನ್​ ಸರ್ಜಾಗೆ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ವಿಸ್ಮಯ ಚಿತ್ರದ ಚಿತ್ರೀಕರಣ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್ ಐಆರ್ ದಾಖಲಾಗಿದೆ. ಈ ಸಂಬಂಧ ಈಗಾಗಲೇ ಪೊಲೀಸರು ಮೂರು ಸ್ಥಳಗಳಲ್ಲಿ ಮಹಜರು ಮಾಡಿದ್ದು, ಐವರು ಸಾಕ್ಷಿಗಳಳಿಂದ ಹೇಳಿಕೆಗಳನ್ನು ಪಡೆದಿದ್ದಾರೆ.

ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನಟ ಅರ್ಜುನ್ ಸರ್ಜಾಗೆ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.  ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್  ರದ್ದು ಮಾಡುವಂತೆ ಕೋರಿ ನಟ ಅರ್ಜುನ್ ಸರ್ಜಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.  ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸದಂತೆ ಆದೇಶ ಹೊರಡಿಸಿ ನವೆಂಬರ್ 14ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

Leave a Reply

Your email address will not be published.

Social Media Auto Publish Powered By : XYZScripts.com