ICU ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದಲೇ ಗ್ಯಾಂಗ್ ರೇಪ್..!

ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹದಿಹರೆಯದ ಬಾಲಕಿಯ ಮೇಲೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಸಿಬ್ಬಂದಿ ಮತ್ತು ಆತನ ನಾಲ್ವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶ ಬರೇಲಿಯಲ್ಲಿ ಶನಿವಾರ ನಡೆದಿದೆ. ಕೃತ್ಯ ಎಸಗಿದ ಆಸ್ಪತ್ರೆಯ ಸಿಬ್ಬಂದಿಯವನನ್ನು ಪೋಲೀಸರು ಬಂಧಿಸಿದ್ದು, ಇನ್ನುಳಿದ ನಾಲ್ವರಿಗಾಗಿ ಹುಡುಕಾಡುತ್ತಿದ್ದಾರೆ.

ಹೊಲದಲ್ಲಿ ಕೆಲಸ ಮಾಡುವ ವೇಳೆ ಬಾಲಕಿಗೆ ಹಾವು ಕಚ್ಚಿದ್ದರಿಂದ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯೊಂದರ ಐಸಿಯು ವಾರ್ಡ್ ನಲ್ಲಿ ದಾಖಲಿಸಲಾಗಿತ್ತು. ಐಸಿಯು ವಾರ್ಡ್ ನಲ್ಲಿ ಬಾಲಕಿ ಒಬ್ಬಳೇ ಇರುವ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

‘ ಐಸಿಯುನಿಂದ ಜನರಲ್ ವಾರ್ಡ್ ಗೆ ಸ್ಥಳಾಂತರಿಸಿದ ನಂತರ ಬಾಲಕಿ ಕೃತ್ಯದ ಬಗ್ಗೆ ತಿಳಿಸಿದ್ದಾಳೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಪ್ರಕರಣದ ತನಿಖೆ ಜಾರಿಯಲ್ಲಿದೆ ‘ ಎಂದು ಪೋಲೀಸ್ ಅಧಿಕಾರಿ ತಿಳಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com