ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪಗೆ ದಾಖಲೆಯ ಜಯ – ಬಿಜೆಪಿಗೆ ಮುಖಭಂಗ

ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪ ಐತಿಹಾಸಿಕ ಜಯ ಸಾಧಿಸಿದ್ದಾರೆ. ಬಿಜೆಪಿ ಪರವಾಗಿ ಕಣಕ್ಕಿಳಿದಿದ್ದ ಜೆ. ಶಾಂತಾ ಪರಾಭವಗೊಂಡಿದ್ದಾರೆ. ಬಿಜೆಪಿ ಭದ್ರಕೋಟೆಯೆನಿಸಿದ್ದ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪ, ಜೆ.ಶಾಂತಾ ಅವರ ವಿರುದ್ಧ 2 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಭಾರೀ ಗೆಲುವು ಪಡೆದಿದ್ದಾರೆ.

ವಿ.ಎಸ್ ಉಗ್ರಪ್ಪ 6,28,163 ಮತಗಳನ್ನು ಪಡೆದಿದ್ದಾರೆ. ಜೆ.ಶಾಂತಾ 3,84,892 ಮತಗಳನ್ನು ಗಳಿಸಿದ್ದಾರೆ.

ಒಟ್ಟು ಐದು ಕ್ಷೇತ್ರಗಳ ಪೈಕಿ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯಿಸಿದ್ದಾರೆ. 2 ವಿಧಾನಸಭಾ ಹಾಗೂ 3 ಲೋಕಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿತ್ತು.

Leave a Reply

Your email address will not be published.

Social Media Auto Publish Powered By : XYZScripts.com