ಆ್ಯಂಬಿಡೆಂಟ್ ಡೀಲ್ ಪ್ರಕರಣ : ನವೆಂಬರ್ 24ರವರೆಗೆ ಜನಾರ್ದನ ರೆಡ್ಡಿಗೆ ನ್ಯಾಯಾಂಗ ಬಂಧನ

ಆ್ಯಂಬಿಡೆಂಟ್ ಮಾರ್ಕೆಟಿಂಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನ ನವೆಂಬರ್ 24ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಶನಿವಾರ ತಡರಾತ್ರಿವರೆಗೆ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ರವಿವಾರ ಮಧ್ಯಾಹ್ನ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಜನಾರ್ಧನ  ರೆಡ್ಡಿಯನ್ನು ಹಾಜರುಪಡಿಸಿದರು.

1ನೇ ಎಸಿಎಂಎಂಎಂ ನ್ಯಾಯಾಧೀಶ ಜಗದೀಶ್ , ನವೆಂಬರ್ 24ರವರೆವಿಗೂ 14 ದಿನಗಳ ಕಾಲ ಜನಾರ್ಧನ ರೆಡ್ಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತೀರ್ಪನ್ನು ಪ್ರಕಟಿಸಿದರು. ನಂತರ ಜನಾರ್ಧನ ರೆಡ್ಡಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.
ಇದರಿಂದಾಗಿ ಮೂರನೇ ಬಾರಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪರಪ್ಪನ ಅಗ್ರಹಾರದ ಜೈಲು ಸೇರುವಂತಾಗಿದೆ. ನವೆಂಬರ್ 12ರಂದು ಸೋಮವಾರ ಜನಾರ್ದನ ರೆಡ್ಡಿ ಸಲ್ಲಿಸಿರುವ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ.

Leave a Reply

Your email address will not be published.

Social Media Auto Publish Powered By : XYZScripts.com