IND vs WI : ಧವನ್, ಪಂತ್ ಅರ್ಧಶತಕ : ಸರಣಿ 3-0 ಕ್ಲೀನ್‍ಸ್ವೀಪ್ ಮಾಡಿದ ಭಾರತ

ಚೆನ್ನೈನ ಚೆಪಾಕ್ ಮೈದಾನದಲ್ಲಿ ರವಿವಾರ ನಡೆದ ಮೂರನೇ ಟಿ-20 ಪಂದ್ಯದಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಭಾರತ 6 ವಿಕೆಟ್ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯನ್ನು ರೋಹಿತ್ ಪಡೆ ಕ್ಲೀನ್ ಸ್ವೀಪ್ ಮಾಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವಿಂಡೀಸ್ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 181 ರನ್ ಮೊತ್ತ ಕಲೆಹಾಕಿತು. ವಿಂಡೀಸ್ ಪರವಾಗಿ ನಿಕೋಲಸ್ ಪೂರನ್ 53 ಹಾಗೂ ಡ್ಯಾರೆನ್ ಬ್ರಾವೊ 43 ರನ್ ಗಳಿಸಿದರು. ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ 2 ಹಾಗೂ ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು.

ಗುರಿಯನ್ನು ಚೇಸ್ ಮಾಡಲಿಳಿದ ಭಾರತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಗೆಲುವಿನ ದಡ ಸೇರಿತು. ಭಾರತದ ಪರವಾಗಿ ಮಿಂಚಿನ ಅರ್ಧಶತಕ ಬಾರಿಸಿದ ಶಿಖರ್ ಧವನ್ 92 (10 ಬೌಂಡರಿ, 2 ಸಿಕ್ಸರ್) ಹಾಗೂ ರಿಶಭ್ ಪಂತ್ 58 (5 ಬೌಂಡರಿ, 3 ಸಿಕ್ಸರ್) ರನ್ ಗಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com