IND vs WI : ಚೆಪಾಕ್ ಅಂಗಳದಲ್ಲಿಂದು 3ನೇ T20 – ಭಾರತಕ್ಕೆ ಸರಣಿ ಕ್ಲೀನ್‍ಸ್ವೀಪ್ ಗುರಿ

ಚೆನ್ನೈನ ಚೆಪಾಕ್ ಅಂಗಳದಲ್ಲಿ ರವಿವಾರ ಭಾರತ ಹಾಗೂ ವೆಸ್ಟ್ಇಂಡೀಸ್ ತಂಡಗಳ ನಡುವೆ ಮೂರನೇ ಟಿ-20 ಪಂದ್ಯ ನಡೆಯಲಿದೆ. ಮೊದಲೆರಡು ಪಂದ್ಯಗಳನ್ನು ಜಯಿಸಿ ಸರಣಿಯನ್ನು ತನ್ನದಾಗಿಸಿಕೊಂಡಿರುವ ರೋಹಿತ್ ಪಡೆ 3ನೇ ಮ್ಯಾಚನ್ನೂ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ.

ಇನ್ನೊಂದೆಡೆ ಪ್ರವಾಸಿ ವೆಸ್ಟ್ಇಂಡೀಸ್ ತಂಡ, ಕೊನೆಯ ಪಂದ್ಯವನ್ನು ಗೆದ್ದು ಸರಣಿಯಲ್ಲಿ ವೈಟ್ ವಾಷ್ ಮುಖಭಂಗ ತಪ್ಪಿಸಿಕೊಳ್ಳಲು ಯತ್ನಿಸಲಿದೆ.

ಮೂರನೇ ಟಿ-20 ಪಂದ್ಯದಿಂದ ಉಮೇಶ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಿರುವ ಆಯ್ಕೆಗಾರರು, ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ವೇಗಿ ಸಿದ್ಧಾರ್ಥ್ ಕೌಲ್ ಗೆ ಸ್ಥಾನ ಕಲ್ಪಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com