ಅನಂತ್ ಕುಮಾರ್ ಅವರನ್ನು ಕಳೆದುಕೊಂಡು ಪಕ್ಷ, ನಾಡು, ದೇಶ ಬಡವಾಗಿದೆ : ಬಿಎಸ್ ವೈ ಕಂಬನಿ

ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಬಿಎಸ್ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ. ಮಾದ್ಯಮ ಪ್ರಕಟಣೆ ಮೂಲಕ ಸಂತಾಪ ವ್ಯಕ್ತಪಡಿಸಿದ ಯಡಿಯೂರಪ್ಪ ‘ ಹಿರಿಯ ನೇತಾರ ,ನಮ್ಮ ಜೊತೆಗಾರ ಅನಂತ್ ಕುಮಾರ್ ಅವರ ನಿಧನವು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಆದ ಭಾರೀ ನಷ್ಟ.

‘ ಅವರನ್ನು ಕಳೆದುಕೊಂಡು ಪಕ್ಷ, ನಾಡು, ದೇಶ ಬಡವಾಗಿದೆ. ಪ್ರತಿನಿತ್ಯ ಪಕ್ಷದ ಸಂಘಟನೆಯನ್ನು ಬೆಳೆಸಲು ನಾವು ಸಮಾಲೋಚನೆ ಮಾಡುತ್ತಿದ್ದುದನ್ನು ಮರೆಯಲಾಗದು. ರಾಜಕೀಯ ವಾಗಿ ಬಹಳ ಬೇಗ ಉನ್ನತ ಸ್ಥಾನದ ವರೆಗೂ ಏರಿದ್ದರು ‘

‘ ರಾಜಕೀಯವಾಗಿ ಬಹಳಷ್ಟು ಕ್ಲಿಷ್ಟ ಸಂದರ್ಭಗಳಲ್ಲಿ ಉತ್ತಮ ಸಲಹೆಗಳನ್ನು ನೀಡಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದರು. ಒಮ್ಮೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಅವರು ಪಕ್ಷದ ಬೆಳವಣಿಗೆಗೆ ಕಾರಣರಾಗಿದ್ದ ಅನಂತಕುಮಾರ್ ಅವರ ಕೊಡುಗೆಯನ್ನು ಮರೆಯಲಾಗದು. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಅವರ ಕುಟುಂಬಕ್ಕೆ ದುಃಖ ಭರಿಸಲು ದೇವರು ಶಕ್ತಿ ನೀಡಲಿ ‘ ಎಂದು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com