Women’s WT20 : ಮಿಥಾಲಿ ರಾಜ್ ಅರ್ಧಶತಕ – ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ

ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ರವಿವಾರ ನಡೆದ ಮಹಿಳೆಯರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ‘ಬಿ’ ಗುಂಪಿನ ಲೀಗ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 133 ರನ್ ಮೊತ್ತ ಕಲೆಹಾಕಿತು. ಪಾಕಿಸ್ತಾನದ ಪರವಾಗಿ ಬಿಸ್ಮಾಹ್ ಮಾರೂಫ್ 53, ನಿದಾ ದಾರ್ 52 ರನ್ ಗಳಿಸಿದರು.

ಗುರಿಯನ್ನು ಬೆನ್ನತ್ತಿದ ಭಾರತ 19 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 137 ರನ್ ಸೇರಿಸಿ ಗೆಲುವಿನ ನಗೆ ಬೀರಿತು. ಭಾರತದ ಪರವಾಗಿ ಮಿಥಾಲಿ ರಾಜ್ 56, ಸ್ಮೃತಿ ಮಂದಾನಾ 26 ರನ್ ಗಳಿಸಿದರು. ಅರ್ಧಶತಕ ಬಾರಿಸಿದ ಮಿಥಾಲಿ ರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.

Leave a Reply

Your email address will not be published.