ರೋಹಿತ್, ಕೊಹ್ಲಿ ಹಿಂದಿಕ್ಕಿದ ಮಿಥಾಲಿ ರಾಜ್ – T20 ಕ್ರಿಕೆಟ್‍ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಕೆ

ವೆಸ್ಟ್ಇಂಡೀಸ್ ನಲ್ಲಿ ಐಸಿಸಿ ಮಹಿಳೆಯರ ಟಿ-20 ವಿಶ್ವಕಪ್ ನಡೆಯುತ್ತಿದ್ದು, ಭಾರತದ ವನಿತೆಯರ ತಂಡ ಈಗಾಗಲೇ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ. ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಟೀಮ್ ಇಂಡಿಯಾ ಆಟಗಾರ್ತಿ ಮಿಥಾಲಿ ರಾಜ್, ದಾಖಲೆಯೊಂದನ್ನು ಬರೆದಿದ್ದಾರೆ.

ಭಾರತ ಮಹಿಳೆ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸವುಮನ್ ಮಿಥಾಲಿ ರಾಜ್ ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ನಲ್ಲಿ ಭಾರತದ ಪರವಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿದ್ದಾರೆ. ಭಾರತದ ಪರವಾಗಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಮಿಥಾಲಿ ರಾಜ್ ಹಿಂದಿಕ್ಕಿದ್ದಾರೆ.

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ನಲ್ಲಿ ಮಿಥಾಲಿ ರಾಜ್ 2283 ರನ್, ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 2207 ರನ್ ಹಾಗೂ ಕ್ಯಾಪ್ಟನ್ ವಿರಾಟ್ ಕೊಹ್ಲಿ 2102 ರನ್ ಗಳಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com