ರಾಮನಗರದಲ್ಲಿ ಆನೆ ದಾಳಿಗೆ ಮೃತಪಟ್ಟ ರೈತ : ಅರಣ್ಯ ಇಲಾಖೆಯಿಂದ ಪರಿಹಾರ ನೀಡುವ ಭರವಸೆ

ಆನೆ ದಾಳಿಗೆ ಸಿಲುಕಿ ರೈತನೊರ್ವ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ.  ತಮ್ಮಯ್ಯ ಎನ್ನುವ ಮೃತ ರೈತನಿಗೆ 65 ವರ್ಷ ವಯಸ್ಸಾಗಿತ್ತು.
ನಿನ್ನೆ ತಡರಾತ್ರಿ ತನ್ನ ಜಮೀನಿನಲ್ಲಿ‌ ಬೆಳೆ ಕಾಯುವ ಸಲುವಾಗಿ ತೋಟಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

ಆನೆದಾಳಿಯಿಂದ ತೀವ್ರ ಗಾಯಗೊಂಡ ರೈತನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ರೈತ ಸಾವಿಗೀಡಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ ಮರಣ್ಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆನೆದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದು ಅರಣ್ಯ ಇಲಾಖೆಯವರು ಪರಿಹಾರ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.

 

 

 

Leave a Reply

Your email address will not be published.

Social Media Auto Publish Powered By : XYZScripts.com