ರಾಜಸ್ಥಾನ : ಟಿಕೆಟ್ ನೀಡದ ಹಿನ್ನೆಲೆ – ಬಿಜೆಪಿ ತೊರೆದ ಶಾಸಕ ಗ್ಯಾನದೇವ್ ಅಹುಜಾ

ರಾಜಸ್ಥಾನ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಬಯಸಿದ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಶಾಸಕ ಗ್ಯಾನದೇವ್ ಅಹುಜಾ ಭಾನುವಾರ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ.

ಸದ್ಯ ರಾಮಗಢ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿರುವ ಗ್ಯಾನದೇವ್ ಅಹುಜಾ, ಚುನಾವಣೆಯಲ್ಲಿ ಸಂಗನೇರ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಂದ ಗುರುತಿಸಿಕೊಂಡಿರುವ ಗ್ಯಾನದೇವ್ ಅಹುಜಾ ‘ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯಿಂದ ನನ್ನ ಹೆಸರನ್ನು ಕೈ ಬಿಡಲಾಗಿದೆ. ನನ್ನ ಹೆಸರನ್ನು ಕೈ ಬಿಟ್ಟಿರುವುದಕ್ಕೆ ಯಾವುದೇ ಕಾರಣವನ್ನೂ ಸಹ ತಿಳಿಸಿಲ್ಲ, ಕುಟುಂಬ ಸದಸ್ಯರ ಹಾಗೂ ಬೆಂಬಲಿಗರ ಒತ್ತಡದ ಮೇರೆಗೆ ನಾನು ಬಿಜೆಪಿ ಪಕ್ಷವನ್ನು ತೊರೆದಿದ್ದೇನೆ. ಸಂಗನೇರ್ ಕ್ಷೇತ್ರದಿಂದ ಸ್ವತಂತ್ರ ಅಬ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ‘ ಎಂದು ಹೇಳಿದ್ದಾರೆ.

Leave a Reply

Your email address will not be published.