ಮೈಸೂರು : ಸಾಲಬಾಧೆ ತಾಳದೆ ಆತ್ಮಹತ್ಯೆಗೆ ಯತ್ನಿಸಿದ ರೈತ – ಆಸ್ಪತ್ರೆಗೆ ದಾಖಲು

ಸಾಲಬಾದೆ ತಾಳದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿ ಮರೀಗೌಡ.ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರೈತ ಬ್ಯಾಂಕ್ ಸೇರಿ ಸುಮಾರು 6 ಲಕ್ಷ, ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ 2.90 ಲಕ್ಷ ಹಾಗೂ ಸುಮಾರು 3 ಲಕ್ಷ ಕೈ ಸಾಲ ಮಾಡಿಕೊಂಡಿದ್ದ. 4 ಎಕರೆ ಭೂಮಿಯಲ್ಲಿ ಕಬ್ಬು ಬೆಳೆದಿದ್ದ. ಬೋರ್ ವೆಲ್ ನೀರು ಕೈಕೊಟ್ಟ ಹಿನ್ನೆಲೆಯಲ್ಲಿ ಕಬ್ಬಿನ ಬೆಳೆ ಕೈ ಸೇರಲಿಲ್ಲ.

ಸಾಲಗಾರರ ಕಾಟ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.