ಬೀದರ್ : ಅಹೋರಾತ್ರಿ ಧರಣಾ ಸ್ಥಳಕ್ಕೆ ಸಚಿವ ಬಂಡೆಪ್ಪ ಖಾಶೆಂಪೂರ್ ಭೇಟಿ

ಬೀದರ – ಡಿಸೆಂಬರ್ 6: ರ್ಔರಾದ್ ಮತ್ತು ಬೀದರ ತಾಲೂಕಿನ ವ್ಯಾಪ್ತಿಯಲ್ಲಿ ಹರಿಯುವ ಮಾಂಜ್ರಾ ನದಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಅವರ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಾ ಸ್ಥಳಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಂಡೆಪ್ಪ ಖಾಶೆಂಪೂರ ಅವರು ಇಂದು ಬೆಳಗ್ಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಹೋರಾಟಗಾರರು, ನಾವು ನ.30ರಿಂದ ಇಲ್ಲಿ ಧರಣಿ ನಡೆಸುತ್ತಿದ್ದೇವೆ.

ನಮ್ಮ ನ್ಯಾಯಯುತ ಬೇಡಿಕೆಗೆಗಳಿಗೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸ್ಪಂದಿಸಬೇಕು ಎಂದು ಇದೆ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಸಚಿವರಿಗೆ ಮನವಿ ಮಾಡಿದರು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರ ಜನಪರವಾಗಿದೆ. ತಾವು ಧೈರ್ಯಗುಂದಬೇಡಿರಿ ಎಂದು ಸಚಿವರು ತಿಳಿಸಿದರು. ಈ ವೇಳೆ ಹೋರಾಟಗಾರರು ಸಚಿವರಿಗೆ, ತಮ್ಮ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

 

Leave a Reply

Your email address will not be published.

Social Media Auto Publish Powered By : XYZScripts.com