ಬಾಲಕಿ ಮೇಲೆ ಅತ್ಯಾಚಾರ : ತಲೆಮರಸಿಕೊಂಡಿದ್ದ ಆರೋಪಿಯ ಬಂಧನ

ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರಿಸಿಕೊಂಡಿದ್ದ ಆರೋಪಿಯನ್ನ ಎಚ್.ಡಿ.ಕೋಟೆ ಮತ್ತು ಸರಗೂರು ಠಾಣಾ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ದಿನೇಶ್ 14 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ವೆಸಗಿ ಕಳೆದ ನಾಲ್ಕು ದಿನಗಳಿಂದ ತಲೆ ಮರೆಸಿಕೊಂಡಿದ್ದನು. ಈತನ ವಿರುದ್ದ ಪ್ರಕರಣ ದಾಖಲಾಗಿತ್ತು. ಮೈಸೂರು ಹುಣಸೂರು ತಾಲೂಕಿನ ಹನಗೋಡು ಸಮೀಪದ ಕೊಳವಿಗೆ ಗ್ರಾಮದ  ದಿನೇಶ (27) ಬಂಧಿತ ಅರೋಪಿ.

ಆರೋಪಿ ದಿನೇಶ್ ಗಾಗಿ ಬಲೆ ಬೀಸಿದ್ದ ಎಚ್.ಡಿ ಕೋಟೆ ಠಾಣಾ ಪೊಲೀಸರು ಇದೀಗ ಆರೋಪಿಯನ್ನ ಹೆಡೆಮುರಿಕಟ್ಟಿದ್ದಾರೆ. ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published.