ಮಾಜಿ ಪ್ರಧಾನಿ ವಾಜಪೇಯಿ ಸ್ಮರಣಾರ್ಥ 100 ರೂ. ಮುಖಬೆಲೆಯ ನಾಣ್ಯ ಬಿಡುಗಡೆಗೊಳಿಸಿದ ಮೋದಿ

ನವದೆಹಲಿ : ಮಾಜಿ ಪ್ರಧಾನಿ ದಿವಂಗತ ಅಟಲ್​ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ಸಂಸತ್​ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, 100 ರೂ ಮುಖಬೆಲೆಯ ಬೆಳ್ಳಿ, ತಾಮ್ರ, ಜಿಂಕ್, ನಿಕ್ಕಲ್ ಲೋಹಗಳನ್ನು ಒಳಗೊಂಡ ನಾಣ್ಯಗಳನ್ನು ಬಿಡುಗಡೆ ಮಾಡಿದರು.

ಈ ನಾಣ್ಯ 135 ಗ್ರಾಂ ತೂಕ ಇದ್ದು ನಾಣ್ಯದ ಒಂದು ಬದಿಯಲ್ಲಿ ವಾಜಪೇಯಿ ಅವರ ಚಿತ್ರ ಹಾಗೂ ಅದರ ಕೆಳಗೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರು ಮತ್ತು ಜನನ ಹಾಗೂ ಮರಣ ವರ್ಷವನ್ನು (1924-2018) ನಮೂದಿಸಲಾಗಿದೆ. ಇನ್ನೊಂದು ಬದಿಯಲ್ಲಿ ಅಶೋಕ ಸ್ತಂಭದ ಲಾಂಛನದ ಕೆಳಗೆ ಸತ್ಯಮೇವ ಜಯತೆ ಹಾಗೂ ಅದರಡಿ 100 ರೂ. ಎಂದು ಬರೆಯಲಾಗಿದೆ. ಒಂದು ಬದಿಯಲ್ಲಿ ಭಾರತ ಹಾಗೂ ಮತ್ತೊಂದು ಬದಿಯಲ್ಲಿ ಇಂಡಿಯಾ ಎಂದು ದೇವನಾಗರಿ ಮತ್ತು ಇಂಗ್ಲಿಷ್​ ಭಾಷೆಗಳಲ್ಲಿ ಬರೆಯಲಾಗಿದೆ.

ಈ ನಾಣ್ಯವನ್ನು ಬೆಳ್ಳಿ (ಶೇ. 50), ತಾಮ್ರ (ಶೇ. 40), ನಿಕ್ಕಲ್​ (ಶೇ.5) ಮತ್ತು ಜಿಂಕ್​ (ಶೇ.5) ಲೋಹ ಬಳಸಿ ತಯಾರಿಸಲಾಗಿದೆ.

Image result for pm modi release 100 rs coin

ನಾಣ್ಯ ಬಿಡುಗಡೆ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್​ ಸುಮಿತ್ರಾ ಮಹಾಜನ್​, ಹಣಕಾಸು ಸಚಿವ ಅರುಣ್​ ಜೇಟ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಮತ್ತು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com