Test Cricket : ದ್ರಾವಿಡ್ ದಾಖಲೆ ಮುರಿದ ಕೊಹ್ಲಿ – 16 ವರ್ಷಗಳಿಂದ ‘ವಾಲ್’ ಹೆಸರಿನಲ್ಲಿತ್ತು ಈ ರೆಕಾರ್ಡ್..!

ಮೆಲ್ಬರ್ನ್ ಕ್ರಿಕೆಟ್ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ 443ಕ್ಕೆ ಡಿಕ್ಲೇರ್ ಮಾಡಿಕೊಂಡಿತು. ಅರ್ಧಶತಕ ಬಾರಿಸಿದ ನಾಯಕ ವಿರಾಟ್ ಕೊಹ್ಲಿ 82 ರನ್ ಗಳಿಸಿ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು.

82 ರನ್ ಗಳ ಈ ಇನ್ನಿಂಗ್ಸ್ ಮೂಲಕ ವಿರಾಟ್ ಕೊಹ್ಲಿ 16 ವರ್ಷಗಳ ಕಾಲ ರಾಹುಲ್ ದ್ರಾವಿಡ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ. ಭಾರತದ ಪರವಾಗಿ ವಿದೇಶಿ ನೆಲದಲ್ಲಿ ಒಂದು ಕ್ಯಾಲೆಂಡ‍ರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

2002ನೇ ಸಾಲಿನಲ್ಲಿ ರಾಹುಲ್ ದ್ರಾವಿಡ್ ವಿದೇಶಿ ನೆಲದಲ್ಲಿ 1137 ರನ್ ಗಳಿಸಿದ್ದರು. 2018 ಕ್ಯಾಲೆಂಡರ್ ವರ್ಷದಲ್ಲಿ 1138 ರನ್ ಗಳಿಸಿರುವ ವಿರಾಟ್ ಕೊಹ್ಲಿ, ದ್ರಾವಿಡ್ ಹೆಸರಿನಲ್ಲಿದ್ದ 16 ವರ್ಷಗಳಷ್ಟು ಹಳೆಯ ದಾಖಲೆಯನ್ನು ಮುರಿದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com