Boxing Day Test : ಭಾರತಕ್ಕೆ 137 ರನ್ ಭರ್ಜರಿ ಜಯ – ಆಸೀಸ್‍ಗೆ ಸೋಲಿನ ಪಂಚ್ ನೀಡಿದ ಕೊಹ್ಲಿಪಡೆ

ಮೆಲ್ಬರ್ನ್ ಕ್ರಿಕೆಟ್ ಅಂಗಳದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ 137 ರನ್ ಭರ್ಜರಿ ಜಯ ದಾಖಲಿಸಿದೆ. ಬಾಕ್ಸಿಂಗ್ ಡೇ ಟೆಸ್ಟ್ ನಲ್ಲಿ ಕಾಂಗರೂ ಪಡೆಗೆ ಸೋಲಿನ ಪಂಚ್ ನೀಡಿರುವ ಕೊಹ್ಲಿಪಡೆ 4 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಗೆಲ್ಲಲು 399 ರನ್ ಗುರಿಯನ್ನು ಬೆನ್ನತ್ತಿದ್ದ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 261ಕ್ಕೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಭಾರತದ ಪರವಾಗಿ ಜಸ್ಪ್ರೀತ್ ಬುಮ್ರಾ 3, ರವೀಂದ್ರ ಜಡೇಜಾ 3, ಇಶಾಂತ್ ಶರ್ಮಾ 2 ಹಾಗೂ ಮೊಹಮ್ಮದ್ ಶಮಿ 2 ವಿಕೆಟ್ ಪಡೆದರು.

ಪಂದ್ಯದಲ್ಲಿ ಆಸ್ಟ್ರೇಲಿಯಾದ ಒಟ್ಟು 9 ವಿಕೆಟ್ ಉರುಳಿಸಿದ ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

Leave a Reply

Your email address will not be published.