Sydney Test : ಪೂಜಾರಾ 18ನೇ ಟೆಸ್ಟ್ ಶತಕ – ಮಯಂಕ್ ಅರ್ಧಶತಕ ; ಉತ್ತಮ ಮೊತ್ತದತ್ತ ಭಾರತ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆರಂಭಗೊಂಡಿದ್ದು, ಟೀಮ್ಇಂಡಿಯಾ ಉತ್ತಮ ಸ್ಥಿತಿಯಲ್ಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 303 ರನ್ ಗಳಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

18ನೇ ಟೆಸ್ಟ್ ಶತಕ ಬಾರಿಸಿದ ಚೇತೇಶ್ವರ ಪೂಜಾರಾ 130 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ. ಅರ್ಧಶತಕ ಸಿಡಿಸಿದ ಮಯಂಕ್ ಅಗರ್ವಾಲ್ 77 ರನ್ ಗಳಿಸಿ ನೇಥನ್ ಲಾಯನ್ ಎಸೆತದಲ್ಲಿ ಮಿಚೆಲ್ ಸ್ಟಾರ್ಕ್ ಗೆ ಕ್ಯಾಚಿತ್ತು ನಿರ್ಗಮಿಸಿದರು. ಆಸ್ಟ್ರೇಲಿಯಾ ಪರವಾಗಿ ಜೋಶ್ ಹೇಜಲ್ವುಡ್ 2, ಮಿಚೆಲ್ ಸ್ಟಾರ್ಕ್ 1 ಹಾಗೂ ನೇಥನ್ ಲಾಯನ್ 1 ವಿಕೆಟ್ ಪಡೆದರು.

Leave a Reply

Your email address will not be published.