ತುಮಕೂರು : ಸಿದ್ಧಗಂಗಾ ಮಠಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ – ಶ್ರಿಗಳ ಆರೋಗ್ಯ ವಿಚಾರಣೆ

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿಯವರು, ಶ್ರೀಗಳ ಆರೋಗ್ಯ ವಿಚಾರಿಸಿದರು. ‘ ಸಿದ್ಧಗಂಗಾ ಶ್ರೀಗಳ ಆರೋಗ್ಯ ಚೆನ್ನಾಗಿದ್ದು, ಯಾವುದೇ ಆತಂಕ‌ ಬೇಡ ‘ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ‘ ಧಾರವಾಡ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀಗಳ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದು ಹೋಗೋಣ ಎಂದು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದು, ಯಾವುದೇ ಆತಂಕ‌ಬೇಡ. ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವೈದ್ಯರು ಉತ್ತಮವಾಗಿ ಕಾರ್ಯ‌ನಿರ್ವಹಿಸಿದ್ದಾರೆ. ವೈದ್ಯರ ತಂಡಕ್ಕೆ ಭಕ್ತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ‘ ಎಂದು ಹೇಳಿದರು.

ಸಿದ್ಧಗಂಗಾ ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿರುವುದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ್ದು, ಪವಾಡ ಸದೃಶವಾಗಿದೆ. ಭಕ್ತರು ಶ್ರೀಗಳ ಆರೋಗ್ಯ ದೃಷ್ಠಿಯಿಂದ ಭೇಟಿ ಮಾಡಬಾರದು ಎಂದು ಮನವಿ ಮಾಡುತ್ತೇನೆ. ನಾನೂ ಕೂಡಾ ಬಂದರೆ ತೊಂದರೆ ಆಗುತ್ತದೆ ಎಂದುಕೊಂಡೆ. ಕಿರಿಯ ಶ್ರೀಗಳ ಅನುಮತಿ ಪಡೆದು ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com