ಕಾಂಗರೂ ನಾಡಿನಲ್ಲಿ ಭಾರತಕ್ಕೆ ಚೊಚ್ಚಲ ಟೆಸ್ಟ್ ಸರಣಿ ಜಯ – ಇತಿಹಾಸ ಬರೆದ ಕೊಹ್ಲಿಪಡೆ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದು, ಭಾರತ ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಜಯಿಸಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ಕಾಂಗರೂ ನಾಡಿನಲ್ಲಿ ಪ್ರಥಮ ಬಾರಿಗೆ ಟೆಸ್ಟ್ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸಿದೆ.

71 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಟೀಮ್ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಅದರದೇ ನಾಡಿನಲ್ಲಿ ಸೋಲಿಸಿ, ಚೊಚ್ಚಲ ಟೆಸ್ಟ್ ಸರಣಿ ಜಯಿಸುವಲ್ಲಿ ಯಶಸ್ವಿಯಾಗಿದೆ.

ಅಡಿಲೇಡ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 31 ರನ್ ಅಂತರದ ಜಯ ಗಳಿಸಿತ್ತು. ಬಳಿಕ ಪರ್ತ್ ಅಂಗಳದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 146 ರನ್ ಗಳ ಜಯ ದಾಖಲಿಸಿತ್ತು.

ಮೆಲ್ಬರ್ನ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 137 ರನ್ ಗಳಿಂದ ಆಸ್ಟ್ರೇಲಿಯಾವನ್ನು ಬಗ್ಗುಬಡಿದಿತ್ತು. ಸಿಡ್ನಿಯಲ್ಲಿ ನಡೆದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು 3-1ರಿಂದ ಸರಣಿ ಜಯಿಸುವ ಕೊಹ್ಲಿಪಡೆಯ ಕನಸಿಗೆ ಮಳೆ ಅಡ್ಡಿಯಾಯಿತು.

Leave a Reply

Your email address will not be published.

Social Media Auto Publish Powered By : XYZScripts.com