Sydney Test : ನಾಲ್ಕನೇ ಟೆಸ್ಟ್ ಡ್ರಾನಲ್ಲಿ ಅಂತ್ಯ ; ಭಾರತಕ್ಕೆ ಬಾರ್ಡರ್-ಗವಾಸ್ಕರ್ ಟ್ರೋಫಿ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ 71 ವರ್ಷಗಳ ಸುದೀರ್ಘ ಕಾಯುವಿಕೆ ಅಂತ್ಯಗೊಂಡಿದ್ದು, ಟೀಮ್ ಇಂಡಿಯಾ ಕಾಂಗರೂ ನಾಡಿನಲ್ಲಿ ಚೊಚ್ಚಲ ಬಾರಿಗೆ ಟೆಸ್ಟ್ ಸರಣಿ ಜಯಿಸಿದೆ.

ಮಳೆಯ ಕಾರಣದಿಂದ ಆಟ ಮುಂದುವರೆಸಲು ಸಾಧ್ಯವಾಗದೇ, ಅಂಪೈರ್ ಗಳು 5ನೇ ದಿನದಾಟವನ್ನು ರದ್ದುಗೊಳಿಸಿದರು. 3-1 ಅಂತರದಿಂದ ಸರಣಿ ಜಯಿಸಬೇಕೆಂಬ ಕೊಹ್ಲಿ ಪಡೆಯ ಕನಸಿಗೆ ವರುಣ ತಣ್ಣೀರೆರಚಿದ್ದಾನೆ.

ಮೊದಲ ಇನ್ನಿಂಗ್ಸ್ ನಲ್ಲಿ ಅಮೋಘ ಶತಕ ಬಾರಿಸಿದ ಚೇತೇಶ್ವರ ಪೂಜಾರಾ ಪಂದ್ಯಶ್ರೇಷ್ಟ ಹಾಗೂ ಸರಣಿ ಶ್ರೇಷ್ಟ ಪ್ರಶಸ್ತಿಗಳನ್ನು ಪಡೆದರು. ಅಡಿಲೇಡ್ ಹಾಗೂ ಮೆಲ್ಬರ್ನ್ ನಲ್ಲಿ ನಡೆದ ಮೊದಲ ಹಾಗೂ ಮೂರನೇ ಟೆಸ್ಟ್ ಪಂದ್ಯಗಳನ್ನು ಭಾರತ ಗೆದ್ದುಕೊಂಡಿತ್ತು.

 

Leave a Reply

Your email address will not be published.

Social Media Auto Publish Powered By : XYZScripts.com