ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಗೂಳಿಹಟ್ಟಿ : ಸರ್ಕಾರದ ವಿರುದ್ದ ಕಿಡಿಕಾರಿದರು BSY…

ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ  ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಯತ್ನಿಸಿದಾಗ ಬೆಂಬಲಿಗರು ಅದನ್ನು ತಡೆದಿದ್ದಾರೆ.

ಒಬ್ಬ ಶಾಸಕರ ಸ್ಥಿತಿಯೇ ಹೀಗಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನು..? ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು. ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮರಳು ಸಿಗುತ್ತಿಲ್ಲ ಎಂದು ಆರೋಪಿಸಿ ನಿನ್ನೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಕಣ್ಣಿಗೆ ಪೆಟ್ರೋಲ್ ಹೋಗಿದ್ದ ಪರಿಣಾಮ ಶಂಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ವೈದ್ಯರು ಶಾಸಕರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ‘ಅಕ್ರಮ ಮರಳು ದಂಧೆ ವಿರುದ್ಧ ಹೋರಾಡಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಒಬ್ಬ ಶಾಸಕರ ಸ್ಥಿತಿಯೇ ಹೀಗಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನು? ಕಾಂಗ್ರೆಸ್ ಏಜೆಂಟರೇ ಮರಳು ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು  ಆರೋಪಿಸಿದರು.

2 thoughts on “ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಗೂಳಿಹಟ್ಟಿ : ಸರ್ಕಾರದ ವಿರುದ್ದ ಕಿಡಿಕಾರಿದರು BSY…

Leave a Reply

Your email address will not be published.